ಲಾಕ್ ಡೌನ್, ಸೀಲ್ ಡೌನ್ ಜಾರಿಯಾಗಲ್ಲ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಪಾಠಗಳನ್ನು ಕಲಿತಿದ್ದೇವೆ. ಕಳೆದ ಬಾರಿ ಲಸಿಕೆ ಇರಲಿಲ್ಲ.ಈ ಬಾರಿ ಲಸಿಕೆ ಇದೆ. ಚಿಕಿತ್ಸೆ ನೀಡೋದು ಗೊತ್ತಿದೆ. ಹೀಗಾಗಿ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದರು.

ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್, ಸೀಲ್ ಡೌನ್, ನೈಟ್ ಕಪ್ರ್ಯೂ ಜಾರಿ ಮಾಡಲ್ಲ. ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

 

NEWS DESK

TIMES OF BENGALURU