ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಿ

ಬೆಂಗಳೂರು: ಇತ್ತೀಚೆಗೆ 6ರಿಂದ 8ನೇ ತರಗತಿವರೆಗೆ ಶಾಲೆಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆಯೇ ಎಂಬ ಬಗ್ಗೆ ಮಾ. 30ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್, ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸಂವಿಧಾನದ 21ನೇ ವಿಧಿ ಶಿಕ್ಷಣ ಹಕ್ಕನ್ನು ನೀಡಿದೆ.

ಈ ಹಕ್ಕಿನಡಿ ಮಧ್ಯಾಹ್ನದ ಬಿಸಿಯೂಟವನ್ನು ನೀಡಬೇಕಿದೆ. ಹಸಿದ ಹೊಟ್ಟೆಯಲ್ಲಿ ಮಕ್ಕಳು ಕಲಿಯುವುದು ಅಸಾಧ್ಯ ಎಂದು ಎಂದು ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದಲ್ಲದೆ ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಶಾಲೆಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಹೀಗಾಗಿ ಮಧ್ಯಾಹ್ನದ ಬಿಸಿಯೂಟವನ್ನೂ ನೀಡಲು ಅಗತ್ಯ ಕ್ರಮ ಕೈಗೊಳ್ಳಬಹುದು. ಅದಕ್ಕಾಗಿ ಕೇಂದ್ರ ಸರ್ಕಾರದಿಂದ ಅನುಮತಿಗೆ ಕಾಯುವ ಅಗತ್ಯವಿಲ್ಲ ಎಂದು ನ್ಯಾಯಪೀಠ ಸೂಚಿಸಿದೆ.

 

NEWS DESK

TIMES OF BENGALURU