6 ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಮತ್ತೆ ಹೋರಾಟ

ಬೆಂಗಳೂರು : ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ, ಪಂಚಮಸಾಲಿ ಸಮುದಾಯದ ಸಮಸ್ಯೆಗಳನ್ನು ರಾಜ್ಯ ಸರ್ಕಾರ ಬಗೆ ಹರಿಸುವುದಾಗಿ ಹೇಳಿತ್ತು ಆದರೆ ರಾಜ್ಯ ಸರ್ಕಾರ 6 ತಿಂಗಳಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿಗಳು,ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಬೇಡಿಕೆಯನ್ನು ರಾಜ್ಯ ಸರ್ಕಾರ 6 ತಿಂಗಳೊಳಗೆ ಈಡೇರಿಸುವುದಾಗಿ ಭರವಸೆ ನೀಡಿದೆ. ಹೀಗಾಗಿ ಸೆಪ್ಟೆಂಬರ್ 15 ರವರೆಗೆ ಹೋರಾಟವನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.

NEWS DESK

TIMES OF BENGALURU