ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಬೆಂಗಳೂರು-ಜೈಪುರ ನಡುವೆ ಸಂಚರಿಸುತ್ತಿದ್ದ ಇಂಡಿಗೊ ವಿಮಾನದಲ್ಲಿ ಇಂದು ಬೆಳಿಗ್ಗೆ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರಿನಿಂದ ಜೈಪುರಕ್ಕೆ ಇಂಡಿಗೊ (ವಿಮಾನ ಸಂಖ್ಯೆ 6ಇ 469) ಸಂಸ್ಥೆಯ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ವೇಳೆ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಡಾ. ಸುಬಹಾನಾ ನಜೀರ್ ಅವರು, ವಿಮಾನದ ಸಿಬ್ಬಂದಿಯ ನೆರವಿನಿಂದ ಆ ಮಹಿಳೆಗೆ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಆಕಾಶದಲ್ಲಿ ವಿಮಾನ ಸಂಚರಿಸುವ ವೇಳೆಯಲ್ಲೇ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

NEWS DESK

TIMES OF BENGALURU