ಬೆಂಗಳೂರಲ್ಲಿ 3 ಕಡೆ ಕೋವಿಡ್ ಕೇರ್ ಸೆಂಟರ್

ಬೆಂಗಳೂರು : ಬೆಂಗಳೂರಿನಲ್ಲಿ ಮೂರು ಕಡೆ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತದೆ, ಬೆಂಗಳೂರು, ಬೀದರ್, ಕಲಬುರಗಿಗಳ ಮೇಲೆ ನಿಗಾ ವಹಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.

ದೇಶದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಇಂದು (ಬುಧವಾರ) ಸಿಎಂಗಳ ಸಭೆ ಕರೆದಿದ್ದರು. ಸಭೆ ಬಳಿಕ ಸಿಎಂ ಯಡಿಯೂರಪ್ಪ ಮಾತನಾಡಿದ್ದು, ರಾಜ್ಯದಲ್ಲಿ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಮೈಕ್ರೋ ಕಂಟೈನ್ಮೆಂಟ್ ಜೋನ್ ಮಾಡಲಾಗುತ್ತದೆ ಎಂದರು. 3ಟಿ (ಟೆಸ್ಟ್ ಟ್ರ್ಯಾಕ್ ಟ್ರೀಟ್) ಮಂತ್ರವನ್ನು ಅನುಸರಿಸಬೇಕು. ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ಗಡಿ ಜಿಲ್ಲೆಗಳಲ್ಲಿ ಎಚ್ಚರ ವಹಿಸಲಾಗುವುದು ಎಂದರು.

 

NEWS DESK

TIMES OF BENGALURU