8 ದಿನ ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯ..!

ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದಲ್ಲಿನ ನಾಡಪ್ರಭು ಕೆಂಪೇಗೌಡ ರೈಲು ನಿಲ್ದಾಣದಿಂದ ಮೈಸೂರು ರಸ್ತೆ ಮೆಟ್ರೊ ನಿಲ್ದಾಣದವರೆಗೆ ಇದೇ 21ರಿಂದ 28ರ ತನಕ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‍ಸಿಎಲ್) ತಿಳಿಸಿದೆ.

ಮೈಸೂರು ರಸ್ತೆಯಿಂದ-ಕೆಂಗೇರಿಯವರೆಗೆ ಮುಂದಿನ ತಿಂಗಳು ಪರೀಕ್ಷಾರ್ಥ ರೈಲು ಸಂಚಾರ ನಡೆಸಲು ಬಿಎಂಆರ್‍ಸಿಎಲ್ ಮುಂದಾಗಿದ್ದು, ಇದಕ್ಕಾಗಿ ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ಮಾರ್ಗದಲ್ಲಿ ಸಿಗ್ನಲಿಂಗ್ ವ್ಯವಸ್ಥೆ ಮಾರ್ಪಾಡು ಕಾಮಗಾರಿ ಹಮ್ಮಿಕೊಳ್ಳಲಿದೆ. ಇದಕ್ಕಾಗಿ ಈ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಈ ಅವಧಿಯಲ್ಲಿ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್‍ನಿಂದ ಬೈಯಪ್ಪನಹಳ್ಳಿ ನಿಲ್ದಾಣದ ನಡುವೆ ಮಾತ್ರ ಮೆಟ್ರೊ ರೈಲು ಸಂಚರಿಸಲಿದೆ. ಮಾ.29ರ ಬೆಳಿಗ್ಗೆ 7ರಿಂದ ಎಂದಿನಂತೆ ಸೇವೆ ಇರಲಿದೆ. ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವೆ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದೂ ಬಿಎಂಆರ್‍ಸಿಎಲ್ ಹೇಳಿದೆ.

NEWS DESK

TIMES OF BENGALURU