ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ

ಬೆಂಗಳೂರು :ಮುಂಬೈ-ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೆ ವಾಹನಗಳು ನಿಂತಿವೆ.

ದಾಬಸ್‍ಪೇಟೆ ಸಮೀಪ ಬೆಳಗ್ಗೆ 4 ಗಂಟೆ ಸುಮಾರಿಗೆ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ್ದು, ಲಾರಿಗಳು ರಸ್ತೆಗೆ ಅಡ್ಡವಾಗಿ ಬಿದ್ದಿರುವುದರಿಂದ ಸಂಚಾರ ಬಂದ್ ಆಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕ್ರೈನ್ ಅಪಘಾತ ಸ್ಥಳಕ್ಕೆ ತೆರಳಿದೆ ಎಂದು ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿರುವ ಟ್ರಕ್ ಚಾಲಕರು ತಿಳಿಸಿದ್ದಾರೆ.

NEWS DESK

TIMES OF BENGALURU