ರಾಜ್ಯದಲ್ಲಿ ಜಿಂಕೆ, ಮಂಕಿ ಪಾರ್ಕ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಮಂಕಿ ಮತ್ತು ಜಿಂಕೆ ಪಾರ್ಕ್ ನಿರ್ಮಾಣಕ್ಕೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಡು ಪ್ರಾಣಿಗಳ ಹಾವಳಿ, ನಿಯಂತ್ರಣ ಮತ್ತು ಪರಿಹಾರದ ವಿಷಯವನ್ನು ಪ್ರಸ್ತಾಪ ಮಾಡಿದ ಶಾಸಕ ಕಾಡುಪ್ರಾಣಿಗಳಿಂದ ರೈತರ ಬೆಳೆ ಹಾಳಾಗುತ್ತಿದೆ. ರೈತರಿಗೆ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು. ಇದಕ್ಕೆ ಪರಿಹಾರ ಕುರಿತಾಗಿ ಕ್ರಮ ಕೈಗೊಳ್ಳಲಾಗುವುದು. ಜಿಂಕೆ ಹಾವಳಿ ಜಾಸ್ತಿ ಇರುವ ಬಯಲು ಸೀಮೆಯಲ್ಲಿ ಜಿಂಕೆ ಪಾರ್ಕ್ ನಿರ್ಮಾಣ ಹಾಗೂ ಮಂಕಿ ಪಾರ್ಕ್ ನಿರ್ಮಾಣ ಮಾಡುವುದರ ಬಗ್ಗೆ ಮಾಹಿತಿ ತಿಳಿಸಿದ್ದಾರೆ.

NEWS DESK
TIMES OF BENGALURU