ಹಾಸ್ಟಲ್‍ನಲ್ಲಿ 15 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಟ್ಟಹಾಸ. ಬೆಂಗಳೂರಿನ ಮಲ್ಲೇಶ್ವರದ ಈಡಿಗರ ಲೇಡಿಸ್ ಹಾಸ್ಟಲ್‍ನಲ್ಲಿ 15 ವಿದ್ಯಾರ್ಥಿನಿಯರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಮೊದಲು ಹೊರ ಜಿಲ್ಲೆಯಿಂದ ಬಂದಿದ್ದ ಒಬ್ಬ ವಿದ್ಯಾರ್ಥಿನಿಗೆ ಸೋಂಕು ತಗುಲಿತ್ತು. ಬಳಿಕ ಬಿಬಿಎಂಪಿ ಸಿಬ್ಬಂದಿ ಹಾಸ್ಟಲ್‍ನಲ್ಲಿದ್ದ 53 ವಿದ್ಯಾರ್ಥಿನಿಯರನ್ನು ಪರೀಕ್ಷೆಗೊಳಪಡಿಸಿದಾಗ ಇದರಲ್ಲಿ 14 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಕೊರೊನಾ ಪಾಸಿಟಿವ್ ಬಂದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕವಾದ ರೂಮ್ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ.

NEWS DESK
TIMES OF BENGALURU