ಬೆಂಗಳೂರು : ರಾಜ್ಯ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಸೇವಾ ಹಿರಿತನದ ಮೇಲೆ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಗೌರವ ಧನ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ವೈದ್ಯಕೀಯ ಸೇವೆ ನೀಡುವ ಪ್ರಸ್ತಾವನೆಯನ್ನೂ ಸಲ್ಲಿಸುವುದಾಗಿ ತಿಳಿಸಿದ್ದಾರೆ.
NEWS DESK
TIMES OF BENGALURU