ಕೋವಿಡ್ ವಿರುದ್ಧದ ಸಮರದಲ್ಲಿ ಕೈಜೋಡಿಸಿ

ಬೆಂಗಳೂರು:  ಕರ್ನಾಟಕ ಸೇರಿ ದೇಶದ ಕೆಲವು ರಾಜ್ಯಗಳಲ್ಲಿ ಆತಂಕ ಹೆಚ್ಚಾಗುತ್ತಿರುವ ಹಿನ್ನಲೆ ರಾಜ್ಯದ ಜನತೆ ಲಸಿಕೆ ಪಡೆದುಕೊಂಡು, ಸರ್ಕಾರದೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಕೊರೋನಾ ಸಾಂಕ್ರಾಮಿಕ ರೋಗವನ್ನು ನಿರ್ಲಕ್ಷ್ಯ ಮಾಡಬೇಡಿ. ನಾನೂ ಕೂಡ ಕೊರೋನಾ ಲಸಿಕೆ ಪಡೆದುಕೊಂಡಿದ್ದೇನೆ. ನಿಯಮಗಳ ಅನ್ವಯ ಎಲ್ಲಾ ಅರ್ಹರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಲಸಿಕೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ಕೊರೋನಾ ಮಣಿಸಲು ಅಗತ್ಯವಾಗಿದೆ. ಇದರ ಜೊತೆಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ವಚ್ಛತೆ ಕಾಪಾಡುವುದನ್ನು ಮರೆಯದಿರಿ. ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಕೊರೊನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ತಿಳಿಸಿದ್ದಾರೆ.

NEWS DESK

TIMES OF BENGALURU