ಹೆಚ್.ಡಿ.ಕೆ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿಡಿ ಪ್ರಕರಣದಲ್ಲಿ 5 ಕೋಟಿ ಡೀಲ್ ನಡೆದಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಇದೀಗ ಎಸಿಬಿಯಲ್ಲಿ ದೂರು ದಾಖಲಾಗಿದೆ. 5 ಕೋಟಿ ವ್ಯವಹಾರ ಹೇಳಿಕೆಗೆ ಸಂಬಂಧಿಸಿದಂತೆ ವಕೀಲರಾದ ಮಂಜುನಾಥ್ ಹಾಗೂ ಸಿದ್ದೇಶ್ ಎಂಬುವವರು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸಿಬಿಗೆ ದೂರು ನೀಡಿದ್ದಾರೆ.

ಸಿಡಿ ಪ್ರಕರಣದಲ್ಲಿ 5 ಕೋಟಿ ಹಣದ ವ್ಯವಹಾರ ನಡೆದಿದೆ ಎಂದು ಗೊತ್ತಿದ್ದರೂ ಸದನದಲ್ಲಿ ಪ್ರಸ್ತಾಪಿಸಿಲ್ಲ. ಯಾವುದೇ ತನಿಖಾ ಸಂಸ್ಥೆಗೆ ಮಾಹಿತಿ ನೀಡಿಲ್ಲ. ಕೇವಳ ಮಾಧ್ಯಮಗಳ ಮುಂದೆ ಹೇಳಿಕೆ ನೀಡಲಾಗುತ್ತಿದೆ. ಡೀಲ್ ನಡೆದಿದೆ ಅಂದ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಇಷ್ಟೊಂದು ದೊಡ್ಡ ಮೊತ್ತದ ಹಣದ ಮೂಲವೇನು? ಆ ಹಣವನ್ನು ಯಾರು ಹೇಗೆ ನೀಡಿದ್ದಾರೆ ಎಂಬ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.

NEWS DESK
TIMES OF BENGALURU