ಐರಾವತ ಕ್ಲಬ್ ಕ್ಲಾಸ್ ಬಸ್ ಸಂಚಾರ ಆರಂಭ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕಾಗಿ, ಇಂದಿನಿಂದ ಬೆಂಗಳೂರು ಟು ಬೆಳಗಾವಿ, ಬೆಳಗಾವಿ ಟು ಬೆಂಗಳೂರಿಗೆ ಐರಾವತ ಕ್ಲಬ್ ಕ್ಲಾಸ್ ಬಸ್ ಸಂಚಾರವನ್ನು ಆರಂಭಿಸುತ್ತಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಬೆಳಗಾವಿಗೆ ,ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ಮೂಲಕ ಐರಾವತ ಕ್ಲಬ್ ಕ್ಲಾಸ್ ಸಾರಿಗೆ ಬಸ್ ಸಂಚಾರವನ್ನು ಇಂದಿನಿಂದ ಆರಂಭಿಸುತ್ತಿರುವುದಾಗಿ ತಿಳಿಸಿದೆ.

NEWS DESK

TIMES OF  BENGALURU