ಸ್ವಂತ ಮನೆ ಹೊಂದುವವರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ 3.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಬಡವರಿಗೆ ಶೇ. 6 ರಷ್ಟು ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇದನ್ನು ಶೇ.5 ಕ್ಕೆ ಇಳಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಕರ್ನಾಟಕ ಗೃಹಮಂಡಳಿ ಮತ್ತು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ವಸತಿ ಕಲ್ಪಿಸಲಾಗುವುದು.

ಬ್ಯಾಂಕ್ ಮೂಲಕ ಶೇ. 6 ರಷ್ಟು ಬಡ್ಡಿದರದಲ್ಲಿ 2.25 ಲಕ್ಷ ರೂ. ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ. ಎಸ್ಸಿಎಸ್ಟಿ ವರ್ಗದವರಿಗೆ 3.5 ಲಕ್ಷ ರೂ. ಇತರೆ ವರ್ಗದವರಿಗೆ 2 ಲಕ್ಷ ರೂ. ಗಳನ್ನು ಸರ್ಕಾರ ಸಬ್ಸಿಡಿ ರೂಪದಲ್ಲಿ ನೀಡಲಿದ್ದು, ಉಳಿದ 2.25 ಲಕ್ಷ ರೂಪಾಯಿಯನ್ನು ಬ್ಯಾಂಕ್‍ಗಳಿಂದ ಸಾಲ ಕೊಡಿಸಲಾಗುವುದು ಎಂದು ಹೇಳಿದ್ದಾರೆ.

NEWS DESK
TIMES OF BENGALURU