ಕಾಮೆಡ್-ಕೆ ಪ್ರವೇಶ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು : ಜೂನ್ 20ರಿಂದ ಕಾಮೆಡ್ ಕೆ ಪ್ರವೇಶ ಪರೀಕ್ಷೆಗಳು ಆರಂಭವಾಗಲಿದ್ದು, ಮಾರ್ಚ್ 22ರಿಂದ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಕಾಮೆಡ್-ಕೆ ಕಾರ್ಯಕಾರಿ ಕಾರ್ಯದರ್ಶಿ ಡಾ.ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕಾಮೆಡ್-ಕೆ ಪರೀಕ್ಷೆಯನ್ನು ಜೂನ್ 20ರಂದು ನಡೆಸಲಾಗುತ್ತದೆ. 150ಕ್ಕೂ ಹೆಚ್ಚು ನಗರಗಳಲ್ಲಿನ, 400ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಲ್ಲಿ ಕಾಮೆಡ್-ಕೆ ಪರೀಕ್ಷೆ ನಡೆಯಲಿದೆ. ಈ ವರ್ಷ ಸುಮಾರು 80 ಸಾವಿರ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಸಾಧ್ಯತೆ.

ಈ ಪೈಕಿ ಸರಾಸರಿ ಸುಮಾರು 8 ರಿಂದ 9 ಸಾವಿರ ಮಂದಿ ವಿದ್ಯಾರ್ಥಿಗಳು ಹಾಜರಾತಿ ಪಡೆಯುವ ಸಾಧ್ಯತೆ ಇದೆ ಎಂದು ಹೇಳಿದರು. ಕರ್ನಾಟಕ ಅನುದಾನರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘದಲ್ಲಿನ 180 ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳು, ದೇಶದ 30 ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳ ನೇಮಕಾತಿ ನಡೆಯಲಿದೆ. ನಾಲ್ಕು ಹಂತಗಳಲ್ಲಿ ಆನ್ ಲೈನ್ ಕೌನ್ಸೆಲಿಂಗ್ ಇರಲಿದೆ ಎಂದು ಹೇಳಲಾಗಿದೆ.

NEWS DESK

TIMES OF BENGALURU