ಪಿಪಿಇ ಕಿಟ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು

ಬೆಂಗಳೂರು: ಮಲ್ಲೇಶ್ವರದ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇವರಿಗೆ ಪಿಪಿಇ ಕಿಟ್ ಹಾಕಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೊಡಲಾಗಿತ್ತು. ಕೆಲವು ದಿನಗಳ ಹಿಂದೆಯೇ  ಅವರು ವಾಸವಿದ್ದ ಈಡಿಗರ ವಿದ್ಯಾರ್ಥಿ ನಿಲಯದಲ್ಲೇ ಬಿಬಿಎಂಪಿ ಕ್ವಾರಂಟೈನ್ ಮಾಡಿತ್ತು. ಇವರು ಬಿ.ಕಾಂ ಮತ್ತು ಬಿಬಿಎಂ ವಿದ್ಯಾರ್ಥಿನಿಯರಾಗಿದ್ದು, ಶುಕ್ರವಾರ ಪರೀಕ್ಷೆ ಬರೆಯಬೇಕಿತ್ತು.

ಈ ಹಿನ್ನೆಲೆಯಲ್ಲಿ ಬಿಬಿಎಂಪಿಯ ಆರೋಗ್ಯ ಅಧಿಕಾರಿಗಳು ಹಾಸ್ಟೆಲ್‍ನಿಂದ ಪಿಪಿಇ ಕಿಟ್ ಧರಿಸಿದ ನಾಲ್ವರು ವಿದ್ಯಾರ್ಥಿನಿಯರನ್ನು ಆಂಬುಲೆನ್ಸ್ ಮೂಲಕ ಶೇಷಾದ್ರಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ಕಲಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿದ್ದ ಪರೀಕ್ಷಾ ಕೇಂದ್ರಕ್ಕೆ ಕರೆತಂದು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಈ ನಾಲ್ವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲು ಕಾಲೇಜಿನವರು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿದ್ದರು. ಇತರೆ ವಿದ್ಯಾರ್ಥಿಗಳೊಂದಿಗೆ ಕೂರಲು ಅವಕಾಶ ನೀಡಿರಲಿಲ್ಲ. ಒಟ್ಟಾರೆ ವಿದ್ಯಾರ್ಥಿನಿಯರಿಗೆ ಕೊರೊನಾ ಬಂದಿದೆ ಎಂಬ ಕಾರಣಕ್ಕೆ ಪರೀಕ್ಷೆಯಿಂದ ವಂಚಿತರಾಗದಂತೆ ನೋಡಿಕೊಂಡ ಬಿಬಿಎಂಪಿ ಸಿಬ್ಬಂದಿಗೆ ವಿದ್ಯಾರ್ಥಿನಿಯರು ಧನ್ಯವಾದ ತಿಳಿಸಿದರು.

NEWS DESK

TIMES OF BENGALURU