ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರದ ಅನುಮೋದನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 1,835 ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಸರ್ಕಾರ ಅನುಮೋದನೆ ನೀಡಿದೆ. 2019-20ನೇ ಸಾಲಿನಲ್ಲಿ ರಾಜ್ಯ ಸರ್ಕಾರ 3,407 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲು ಅನುಮತಿ ನೀಡಿತ್ತು.

ಆದರೆ ಈ ವರ್ಷ 2,832 ಉಪನ್ಯಾಸಕ ಹುದ್ದೆ ಖಾಲಿಯಿದ್ದರೂ, ಕಾಯಂ ಉಪನ್ಯಾಸಕರಿಗೆ ಸ್ವಲ್ಪ ಕಾರ್ಯಭಾರ ಹೆಚ್ಚಿಸಿ, 1,835 ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. 2021ನೇ ಸಾಲಿನ ಮಾಸಿಕ 9 ಸಾವಿರ ರೂ. ಗೌರವಧನದ ಆಧಾರದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದೆ.

NEWS DESK
TIMES OF BENGALURU