ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಕೆಲಸ ನೀಡದಿದ್ರೆ ಕಠಿಣ ಕ್ರಮ

ಬೆಂಗಳೂರು: ಕೈಗಾರಿಕೆಗಳ ಸ್ಥಾಪನೆ ಮಾಡುವ ವೇಳೆ ಸ್ಥಳೀಯರಿಗೆ ಉದ್ಯೋಗ ನೀಡದೆ ನಿಯಮ ಉಲ್ಲಂಘಿಸಿದ್ರೆ, ಅಂತಹ ಉದ್ಯಮಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೈಗಾರಿಕೆಗಳಿಗೆ ಜಮೀನು ನೀಡುವ ವೇಳೆಯೇ ಒಪ್ಪಂದ ಮಾಡಿಕೊಳ್ಳಲಾಗುತ್ತೆ. ಜಮೀನು ನೀಡಿದ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು. ಕಾರಣವೊಡ್ಡಿ ಉದ್ಯೋಗ ನೀಡದಿದ್ರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ರಸ್ತೆಗಾಗಿ ಜಮೀನು ಹೋಗಿದ್ದು, ನಮಗೆ ಸಂಬಂಧ ಇಲ್ಲ ಎಂದು ಉದ್ಯಮಿಗಳು ಹೇಳುವಂತಿಲ್ಲ. ಅವರಿಗೂ ಉದ್ಯೋಗ ನೀಡಬೇಕಾಗುತ್ತದೆ ಎಂದು ಹೇಳಿದರು.

NEWS DESK

TIMES OF BENGALURU