ಬೆಂಗಳೂರು : ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡ ಬಿಎಂಟಿಸಿ, ಎಲ್ಲಾ ಚಾಲಕ ಮತ್ತು ನಿರ್ವಾಹಕರಿಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಿದೆ.
ನಿತ್ಯ ಪ್ರಯಾಣಿಕರೊಂದಿಗೆ ಬೆರೆತು ಕೆಲಸ ಮಾಡುವ ಚಾಲಕ ಮತ್ತು ನಿರ್ವಾಹಕರಿಗೆ ಉಚಿತವಾಗಿ ಕೊರೊನಾ ಲಸಿಕೆ ವಿತರಿಸಲು ನಿರ್ಧರಿಸಿರುವುದಾಗಿ ಬಿಎಂಟಿಸಿಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಸಿಬ್ಬಂದಿ ಲಸಿಕೆ ಪಡೆದುಕೊಳ್ಳಬಹುದು, ಸಂಸ್ಥೆ ನೀಡಿರುವ ಗುರುತಿನ ಚೀಟಿ,ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ತೋರಿಸಿ ವ್ಯಾಕ್ಸಿನ್ ಪಡೆದುಕೊಳ್ಳಬೇಕೆಂದು ಬಿಎಂಟಿಸಿ ಮನವಿ ಮಾಡಿದೆ.
NEWS DESK
TIMES OF BENGALURU