ರೈಲ್ವೆ ಪ್ರಯಾಣಿಕರ ಬ್ಯಾಗ್ ಕಳವು: ಆರೋಪಿಗಳ ಬಂಧನ

ಬೆಂಗಳೂರು: ರೈಲಿನಲ್ಲಿ ಪ್ರಾಯಾಣಿಸಿ ಮನೆಗೆ ತಲುಪುವಷ್ಟರಲ್ಲಿ ಪ್ರಯಾಣಿಕರ ಆಭರಣವಿದ್ದ ಬ್ಯಾಗ್ ನಾಪತ್ತೆಯಾಗುತ್ತಿದ್ದ ಜಾಲವನ್ನು ರೈಲ್ವೆ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರಿನ ನಿವಾಸಿ ತಮ್ಮ ಕುಟುಂಬದವರೊಂದಿಗೆ ಸಂಪರ್ಕ ಕ್ರಾಂತಿ ಎಕ್ಸ್ಪ್ರೆಸ್ ರೈಲಿನಲ್ಲಿ ಹುಬ್ಬಳ್ಳಿಯಿಂದ ಯಶವಂತಪುರಕ್ಕೆ ಬಂದಿದ್ದು, ಮನೆಗೆ ತೆರಳಿ ಬ್ಯಾಗ್ ನೋಡಿಕೊಂಡಾಗ ಒಂದು ಬ್ಯಾಗ್ ನಾಪತ್ತೆಯಾಗಿತ್ತು.

ಅದರಲ್ಲಿ 2.25 ಲಕ್ಷ ಮೌಲ್ಯದ 73 ಗ್ರಾಂ ಆಭರಣ ಇತ್ತು. ಈ ಕಳ್ಳತನದ ಬಗ್ಗೆ ದೂರು ದಾಖಲಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ರೈಲ್ವೆ ಪೊಲೀಸರು ತನಿಖೆ ನಡೆಸಿ ಆರೋಪಿ ಸನ್ನಿ ಅಲಿಯಾಸ್ ಸನ್ನಿಸ್ (24) ಎಂಬಾತನನ್ನು ಬಂಧಿಸಿದ್ದಾರೆ. ಹೀಗೆ ಕಳ್ಳತನ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ನಾಗರಾಜ್, ಮೊಸಿನ್ ಎಂಬಾತನನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

NEWS DESK
TIMES OF BENGALURU