ರೈತರಿಂದ ವಿಧಾನಸೌಧ ಚಲೋ ಪ್ರತಿಭಟನೆ

ಬೆಂಗಳೂರು: ಇಂದು ಬೆಳಗ್ಗೆ ದೆಹಲಿ ರೈತ ನಾಯಕರ ನೇತೃತ್ವದಲ್ಲಿ ವಿಧಾನಸೌಧ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 25 ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗಲಿದ್ದು, ಭಾರತೀಯ ರೈತ ನಾಯಕರಾದ ರಾಕೇಶ್ ಟಿಕಾಯತ್, ಡಾ.ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಈ ಹೋರಾಟ ಮಾರ್ಚ್ 26 ರಂದು 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ನಾಯಕರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದು, ಸುಮಾರು 25 ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ಕೆಎಸ್‌ಆರ್ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ರ್ಯಾಲಿ ಆರಂಭವಾಗಲಿದ್ದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಕೋಡಿಹಳ್ಳಿ ಚಂದ್ರಶೇಖರ್, ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್ ಮೊದಲಾದ ರೈತ ನಾಯಕರು ಭಾಗಿಯಾಗಲಿದ್ದಾರೆ.

NEWS DESK
TIMES OF BENGALURU