ಎಲ್ಲ ಹಿರಿಯ ನಾಗರಿಕರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚಾಗುತ್ತಿದ್ದು, 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, 60 ವರ್ಷ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು, 45 ರಿಂದ 60 ವರ್ಷದೊಳಗಿನ ಇತರೆ ಆರೋಗ್ಯ ಸಮಸ್ಯೆಯಿರುವವರು ಕೋವಿಡ್ ಲಸಿಕೆಯನ್ನು ತಪ್ಪದೇ ಪಡೆಯಿರಿ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಸ್ವಚ್ಛತೆ ಪಾಲಿಸೋಣ, ನಾವೆಲ್ಲರೂ ಕೂಡಿ ಕೊರೋನಾ ಹಿಮ್ಮೆಟ್ಟಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

 

NEWS DESK

TIMES OF BENGALURU