ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿ

ಬೆಂಗಳೂರು: ಕೋವಿಡ್-19 ಸಂಕಷ್ಟಕ್ಕೆ ಸಿಲುಕಿ ತತ್ತರಿಸಿಕೊಂಡಿರುವ ಹೋಟೆಲ್ ಕ್ಷೇತ್ರದ ಪುನಶ್ಚೇತನಕ್ಕೆ ಪೂರಕವಾಗುವಂತೆ ಸ್ಟಾರ್ ವರ್ಗೀಕೃತ ಹೋಟೆಲ್‍ಗಳಿಗೆ ಕೈಗಾರಿಕಾ ಸ್ಥಾನಮಾನ ನೀಡಿ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೋಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದವರು ಆತಿಥ್ಯ ಕೈಗಾರಿಕಾ ಸ್ಥಾನಮಾನ ನೀಡಬೇಕೆಂದು ಕೋರಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೋಟೆಲ್ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡಿ, ವಿದ್ಯುಚ್ಛಕ್ತಿ ದರ ಹಾಗೂ ಆಸ್ತಿ ತೆರಿಗೆಯಲ್ಲಿ 5 ವರ್ಷಗಳ ಅವಧಿಗೆ ರಿಯಾಯಿತಿ ನೀಡಿ ಎಂದು ಆದೇಶ ಹೊರಡಿಸಿದೆ.

NEWS DESK
TIMES OF BENGALURU