ನಂದಿ ಬೆಟ್ಟಕ್ಕೆ ರೋಪ್‍ವೇ ಕಾಮಗಾರಿ

ಬೆಂಗಳೂರು : ಪ್ರವಾಸಿ ತಾಣ ನಂದಿಬೆಟ್ಟಕ್ಕೆ ರೂಪ್‍ವೇ ನಿರ್ಮಿಸಲು ಸರ್ಕಾರ ಕ್ರಮ ಕೈಗೊಂಡಿದೆ. ಶೀಘ್ರವೇ ಇದು ಜಾರಿಗೆ ಬರಲಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು. ವಿಧಾನಪರಿಷತ್‍ನಲ್ಲಿ   ಸದಸ್ಯರಾದ ರಘು ಆಚಾರ್ ಮತ್ತು ರಮೇಶ್‍ಗೌಡ ಅವರು ಕೇಳಿದ ಜಂಟಿ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವ್ಯಾಪಕ ಅವಕಾಶಗಳಿವೆ.

370 ಕಿ.ಮೀ ಸಮುದ್ರದ ಕಿನಾರೆ ಇದೆ. ನಂದಿಬೆಟ್ಟಕ್ಕೆ ರೂಪ್ ವೇ ನಿರ್ಮಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಬಜೆಟ್ ನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿರಿಸಲಾಗಿದೆ ಎಂದು ಸುದೀರ್ಘ ವಿವರಣೆ ನೀಡಿದರು.

NEWS DESK

TIMES OF BENGALURU