ಯತ್ನಾಳ್ ವಿರುದ್ಧ ಕ್ರಮಕ್ಕೆ: ಶಾಸಕರ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ 40 ಶಾಸಕರು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಈ ಶಾಸಕರು ಯತ್ನಾಳ್ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರೆಸಿದ್ದಾರೆ. ಯತ್ನಾಳ್ ಅವರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಇದು ಹೀಗೆ ಮುಂದುವರಿದರೇ ಮುಂದಿನ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಮುಖ್ಯಮಂತ್ರಿಯವರಿಗೆ ಮುಜುಗರ ತರುತ್ತಿದ್ದಾರೆ. ಇದು ವಿರೋಧಿಗಳಿಗೆ ಅಸ್ತ್ರವಾಗಿದೆ. ಇದರಿಂದ ವಿಧಾನಸಭೆಯಲ್ಲೂ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಾರ್ಚ್ 25 ರಂದು ಎಲ್ಲಾ ಸಚಿವರು ಮತ್ತು ಶಾಸಕರು ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸುವುದಾಗಿ ಸಿಎಂ ಭರವಸೆ ನೀಡಿದರು. ಕೆಲವು ದಿನಗಳ ಹಿಂದೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಧರಣಿ ನಡೆಸುವುದಾಗಿ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣ ಬೆದರಿಕೆ ಹಾಕಿದ್ದರು, ಆದರೆ ಸಿಎಂ ಪ್ರವೇಶದಿಂದ ಧರಣಿ ಕೈ ಬಿಡಲಾಯಿತು.

NEWS DESK
TIMES OF BENGALURU