ಮಾರ್ಚ್ 26ಕ್ಕೆ ಕರ್ನಾಟಕ ಬಂದ್

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿ ನಿನ್ನೆ ಬೆಂಗಳೂರಿನಲ್ಲಿ ಸಾವಿರಾರು ರೈತರು ಧರಣಿ ನಡೆಸಿದ್ದಾರೆ. ಭಾರತೀಯ ಕಿಸಾನ್ ಸಂಘದ ನಾಯಕ ರಾಕೇಶ್ ಟಿಕಾಯತ್ ಮತ್ತು ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದರು. ಧರಣಿ ಕೊನೆಗೆ ಮಾರ್ಚ್ 26ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಹಲವು ಕಾರ್ಮಿಕ ಸಂಘಟನೆಗಳು ಮತ್ತು ಅಖಿಲ ಭಾರತ ಕೇಂದ್ರ ವ್ಯಾಪಾರ ಒಕ್ಕೂಟ ನಿಗಮ, ಅಖಿಲ ಭಾರತ ಪ್ರಗತಿಶೀಲ ಮಹಿಳಾ ಸಂಘ ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘ ಕರ್ನಾಟಕ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ನಿನ್ನೆಯ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಮ್ಮ ಮೂರು ದಿನಗಳ ಸರಣಿ ಪ್ರತಿಭಟನೆಗೆ ಜನರಿಂದ ಸಿಕ್ಕ ಬೆಂಬಲ ಅದ್ಭುತವಾಗಿತ್ತು. ಕರ್ನಾಟಕದ ರೈತರು ಈ ಕೃಷಿ ಕಾಯ್ದೆಯಿಂದ ಏನು ಪರಿಣಾಮವಾಗುತ್ತದೆ ಎಂದು ಅರ್ಥ ಮಾಡಿಕೊಂಡಿದ್ದಾರೆ.

ಕೃಷಿ ಮಸೂದೆಯನ್ನು ವಿರೋಧಿಸಿ, ಇಂಧನ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಮತ್ತು ಸಾಮಾನ್ಯ ಜನತೆ ಮೇಲೆ ಪರಿಣಾಮ ಬೀರುತ್ತಿರುವ ಹತ್ತು ಹಲವು ಸಮಸ್ಯೆಗಳಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ಒದಗಿಸುತ್ತಿಲ್ಲ ಎಂದು ಮಾರ್ಚ್ 26ರಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ ಬಂದ್‍ಗೆ ಕರೆ ನೀಡಿದ್ದು, ಇದೇ ಮಾದರಿಯಲ್ಲಿ ನಾವು ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

NEWS DESK

TIMES OF BENGALURU