ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ

ಬೆಂಗಳೂರು: ಕೊರೊನಾ 2ನೇ ಅಲೆಯ ಅಬ್ಬರ ರಾಜ್ಯದಲ್ಲಿ ಶುರುವಾಗಿದೆ. ವೈರಸ್‍ನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೆ ತಂದಿದೆ. ಕೊರೊನಾ ನಿಯಂತ್ರಣ ಕ್ರಮಗಳನ್ನು ಅನುಸರಿಸದೇ ಹೋದರೆ ಮಿನಿ ಲಾಕ್‍ಡೌನ್ ಮಾಡಲಾಗುತ್ತದೆ ಎಂದು ಸುಳಿವು ಸರ್ಕಾರ ನೀಡಿದೆ. ಇದಲ್ಲದೆ ಲಸಿಕೆ ಅಭಿಯಾನ ಕೂಡ ರಾಜ್ಯದಲ್ಲಿ ನಡೆಸಲಾಗುತ್ತಿದೆ. ಪ್ರತಿನಿತ್ಯ 3ಲಕ್ಷ ವ್ಯಾಕ್ಸಿನ್ ನೀಡಲಾಗುತ್ತಿದೆ.

ಈ ವಾರ 12 ಲಕ್ಷ ಡೋಸ್ ಕೊರೊನಾ ಲಸಿಕೆಯನ್ನು ನೀಡಲಾಗಿದೆ. ಆದರೆ ಈಗ ಕೇಂದ್ರದಿಂದ ರಾಜ್ಯಕ್ಕೆ ನೀಡಿರುವಂತ ಲಸಿಕೆಯಲ್ಲಿ ಕೊರತೆ ಉಂಟಾಗಿದೆ ಎನ್ನಲಾಗಿದೆ. ಅನೇಕ ಖಾಸಗಿ ಆಸ್ಪತ್ರೆಗಳಲ್ಲಿ ಬೇಡಿಕೆಯಷ್ಟು ಕೊರೊನಾ ಲಸಿಕೆ ನೀಡೋದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಇದುವರೆಗೆ 31 ಲಕ್ಷ ಡೋಸ್ ಕೊರೊನ ಲಸಿಕೆಯನ್ನು ರಾಜ್ಯಕ್ಕೆ ಕೇಂದ್ರದಿಂದ ನೀಡಲಾಗಿದೆ.

NEWS DESK
TIMES OF BENGALURU