ಮೀಸಲಾತಿ ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್‍ಗೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ನೇತೃತ್ವದ ರಾಜ್ಯ ಸರ್ಕಾರವು ಮೀಸಲಾತಿಗೆ ಸಂಬಂಧಪಟ್ಟಂತೆ ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ 50% ಮಿತಿಯನ್ನು ಮೀರಿ ಮೀಸಲಾತಿ ಮಿತಿಯನ್ನು ಹೆಚ್ಚಿಸಲು ಒಲವು ತೋರಿದೆ. ಈ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಿದೆ ಎನ್ನಲಾಗಿದೆ.

ಮೀಸಲಾತಿ ಹೆಚ್ಚಳವನ್ನು ಕೋರಿ ಹಲವಾರು ಸಮುದಾಯಗಳಿಂದ ರಾಜ್ಯ ಸರ್ಕಾರಕ್ಕೆ ಮನವಿಗಳು ಹೆಚ್ಚಾಗುತ್ತಿದ್ದು ಈ ಹಿನ್ನಲೆಯಲ್ಲಿ ಉದ್ಯೋಗ ಮತ್ತು ಶಿಕ್ಷಣದ ಮೀಸಲಾತಿ ಶೇ.50ಕ್ಕೆ ಹೆಚ್ಚಿಸಲು ಸುಪ್ರೀಂ ಕೋರ್ಟ್‍ಗೆ ಮನವಿ ಸಲ್ಲಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎನ್ನಲಾಗಿದೆ.

NEWS DESK
TIMES OF BENGALURU