ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಮಯದಲ್ಲಿ ಪ್ರತಿಭಟನೆ ಸರಿಯಲ್ಲ

ಬೆಂಗಳೂರು : ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಶಾಲಾ-ಕಾಲೇಜು ಬಂದ್ ಮಾಡಿ ಪ್ರತಿಭಟನೆಗೆ ಮುಂದಾಗಿತ್ತು. ಇಂತಹ ಸಂಘಟನೆಯ ಮುಖಂಡರೊಂದಿಗೆ ಸಭೆ ನಡೆಸಿ, ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಎಸ್ ಎಸ್ ಎಲ್ ಸಿ ಪರೀಕ್ಷೆ ಹತ್ತಿರವಾಗುತ್ತಿದೆ.

ಇಂತಹ ವೇಳೆಯಲ್ಲಿ ಪ್ರತಿಭಟನೆ ನಡೆಸೋದು ಸರಿಯಲ್ಲ ಎಂಬುದಾಗಿ ಎಚ್ಚರಿಸಿದರು. ಖಾಸಗಿ ಶಾಲೆಗಳ ಒಕ್ಕೂಟದಿಂದ ಮಾಡಲಾದಂತ ಮನವಿಯಲ್ಲಿನ ಕೆಲ ಬೇಡಿಕೆಗಳನ್ನು ಈಡೇರಿಸೋದಕ್ಕೆ ಸರ್ಕಾರ ಪ್ರಕ್ರಿಯೆಯನ್ನು ನಡೆಸುತ್ತಿದೆ. ಕೊರೋನಾ 2ನೇ ಅಲೆಯ ಅಬ್ಬರದ ಹಿನ್ನಲೆಯಲ್ಲಿ 1 ರಿಂದ 9ನೇ ತರಗತಿಯವರೆಗೆ ಪರೀಕ್ಷೆ ನಡೆಸುವಂತ ಯಾವುದೇ ನಿರ್ಧಾರ ಮಾಡಿಲ್ಲ ಎಂದು ತಿಳಿಸಿದರು. ಕೆಲವೊಂದು ಬೇಡಿಕೆಗಳ ಈಡೇರಿಸಲು ಆರ್ಥಿಕ ಇಲಾಖೆಯ ಜೊತೆಗೂ ಚರ್ಚೆ ನಡೆಸಬೇಕಿದೆ. ಇದರ ಬಗ್ಗೆಯೂ ಖಾಸಗಿ ಶಾಲೆಗಳ ಒಕ್ಕೂಟದ ಮುಖಂಡರ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ಪ್ರತಿಭಟನೆ ಸರಿಯಲ್ಲ ಎಂಬುದಾಗಿಯೂ ಮನವರಿಗೆ ಮಾಡಿಕೊಟ್ಟಿರುವುದಾಗಿ ತಿಳಿಸಿದರು.

 

NEWS DESK

TIMES OF BENGALURU