ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಗೆ ತಕ್ಷಣ ರಕ್ಷಣೆ ನೀಡಬೇಕು. ಆ ಯುವತಿ ತನ್ನನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿರುವುದರಿಂದ ಅದು ರೇಪ್ ಎಂದಾಗಿರುತ್ತದೆ. ಹಾಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಎಸ್‍ಐಟಿ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಹಾಗಾಗಿ ಹೈಕೋರ್ಟ್ ಮುಖ್ಯನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಯಲಿ. ಬಿಜೆಪಿಯವರು ಮೇಟಿ ಪ್ರಕರಣಕ್ಕೆ ಹೋಲಿಕೆ ಮಾಡುತ್ತಿದ್ದಾರೆ ಹಾಗೂ ಫೇಕ್ ಸೀಡಿ ಮಾಡಲು ಹೊರಟಿದ್ದಾರೆ. ರಮೇಶ್ ಪ್ರಕರಣವೇ ಬೇರೆ, ಹೆಚ್.ವೈ.ಮೇಟಿ ಪ್ರಕರಣವೇ ಬೇರೆ. ನಿರ್ಭಯಾ ಕಾಯ್ದೆ ಪ್ರಕಾರ ರಮೇಶ್ ವಿರಿದ್ಧ ಎಫ್‍ಐಆರ್ ದಾಖಲಿಸಬೇಕು ಎಂದರು. ಸದನದಲ್ಲಿ ನಮ್ಮ ಹೋರಾಟ ಮುಂದುವರೆಯುತ್ತೆ. ಕೋರ್ಟ್ ಮೊರೆ ಹೋದವರು ರಾಜೀನಾಮೆ ನೀಡಲಿ. 6 ಮಂದಿ ಸಚಿವರು ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ಹೋರಾಟ ನಡೆಸುತ್ತೆವೆ ಎಂದು ತಿಳಿಸಿದ್ದಾರೆ.

NEWS DESK
TIMES OF BENGALURU