ಬೆಂಗಳೂರು: ನಾಗರಬಾವಿಯ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ಒಂದೇ ಕುಟುಂಬದ ಐವರು ಕೋವಿಡ್ ಸೋಂಕು ಹೊಂದಿರುವುದು ದೃಢಪಟ್ಟಿದೆ.
ಮೊದಲು ವೃದ್ಧರೊಬ್ಬರಿಗೆ ಕೋವಿಡ್ ದೃಢಪಟ್ಟಿತ್ತು. ಅವರ ಜೊತೆ ನೇರ ಸಂಪರ್ಕದಲ್ಲಿದ್ದ ನಾಲ್ವರಲ್ಲೂ ಸೋಂಕು ಪತ್ತೆಯಾಗಿದೆ. ಈ ಅಪಾರ್ಟ್ಮೆಂಟ್ ಸಮುಚ್ಚಯದ ಮೊದಲ ಮಹಡಿಯ 40 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಯ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.ಸೋಂಕಿತರ ಸಂಖ್ಯೆ ಹೆಚ್ಚಿದಂತೆ ಕೋವಿಡ್ ಪರೀಕ್ಷೆಯ ಪ್ರಮಾಣವನ್ನೂ ಹೆಚ್ಚಿಸಲಾಗಿದೆ. ಮಂಗಳವಾರ ಒಟ್ಟು 40 ಸಾವಿರ ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಹೆಚ್ಚು ಪರೀಕ್ಷೆ ನಡೆಸಿ ಸೋಂಕು ಹರಡುವಿಕೆಯನ್ನು ತಡೆಯುವುದು ನಮ್ಮ ಉದ್ದೇಶ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಬಿ.ಕೆ.ವಿಜಯೇಂದ್ರ ತಿಳಿಸಿದರು.
NEWS DESK
TIMES OF BENGALURU