ಅಸಭ್ಯವಾಗಿ ವರ್ತಿಸಿದ ಕಾಮುಕನ ಬಂಧನ

ಬೆಂಗಳೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಮಧುಸೂದನ್ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಮಾ.21ರಂದು ರಾತ್ರಿ ಯುವತಿ ಮತ್ತು ಸ್ನೇಹಿತರು ಚರ್ಚ್ ಸ್ಟ್ರೀಟ್ ನಲ್ಲಿರುವ ಪಬ್ ಗೆ ಬಂದಿದ್ದರು.

ಈ ವೇಳೆ ಸ್ನೇಹಿತನ ರೀತಿ ಯುವತಿಯ ಬಳಿಗೆ ಬಂದಿದ್ದ ಕಾಮುಕ ಮಧುಸೂದನ್ ಅಸಭ್ಯವಾಗಿ ಯುವತಿಯನ್ನು ತಬ್ಬಿಕೊಂಡು ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೇ ಯುವತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆತನನ್ನು ಬಂಧಿಸಿದ್ದಾರೆನ್ನಲಾಗಿದೆ.

NEWS DESK
TIMES OF BENGALURU