ಜುಲೈವರೆಗೂ ಕಾಡುತ್ತಾ ಮಹಾಮಾರಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮತ್ತೆ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದೆ. ಈ ವೇಳೆ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ ಕೊರೊನಾ ವೈರಸ್ ಜುಲೈ ವರೆಗೂ ಕಾಡುವ ಸಾಧ್ಯತೆ ಇದೆ ಎಂದು ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೊರೊನಾ ಆತಂಕ ಮತ್ತಷ್ಟು ಹೆಚ್ಚಾಗಲಿದ್ದು ಈ ಹಿನ್ನಲೆಯಲ್ಲಿ ಜನರು ಹೆಚ್ಚು ಜಾಗರುಕರಾಗಿರಬೇಕು ಎಂದು ತಜ್ಞರ ಸಮಿತಿ ಹೇಳಲಾಗಿದೆ. ಎರಡನೇ ಅಲೆ ಜುಲೈ ವರೆಗೂ ಜನರಿಗೆ ಕಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 1280 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

NEWS DESK
TIMES OF BENGALURU