ಬೆಂಗಳೂರು : ನಗರದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಹಾಯಕ ಸಿಬ್ಬಂದಿಯನ್ನು ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸುವಂತೆ ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪಾಲಿಕೆಯ ಶಾಲಾ ಕಾಲೇಜುಗಳಲ್ಲಿ ಸಾಮೂಹಿಕ ಕೊರೊನಾ ಸೋಂಕು ಪರೀಕ್ಷೆ ಪ್ರಾರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 33 ಪ್ರೌಢಶಾಲೆ, 15 ಪ್ರಾಥಮಿಕ ಶಾಲೆ, 90 ನರ್ಸರಿಗಳು, 14 ಪಿಯು ಕಾಲೇಜುಗಳು, 4 ಪದವಿ ಕಾಲೇಜುಗಳಿದ್ದು, ಒಟ್ಟು 13,839 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಎಲ್ಲ ವಿದ್ಯಾರ್ಥಿಗಳನ್ನು ಹಾಗೂ ಶಾಲಾ ಆಡಳಿತ ಮಂಡಳಿಯ ಸಿಬ್ಬಂದಿಯನ್ನು 15 ದಿನಗಳಿಗೆ ಒಮ್ಮೆ ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸುವಂತೆ ಆಯುಕ್ತರು ಸೂಚನೆ ನೀಡಿದ್ದು, ಕೊರೊನಾ ಸೋಂಕು ಪರೀಕ್ಷೆ ಚುರುಕು ಪಡೆದುಕೊಂಡಿದೆ. ಆದರೆ, ಇಲ್ಲಿಯವರೆಗೆ ಪಾಲಿಕೆಯ ಶಾಲಾ- ಕಾಲೇಜಿನ ಯಾವುದೇ ವಿದ್ಯಾರ್ಥಿ ಅಥವಾ ಶಿಕ್ಷಕರಿಗೆ ಕೊರೊನಾ ಸೋಂಕು ದೃಢಪಟ್ಟಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
NEWS DESK
TIMES OF BENGALURU