ಹಾಸ್ಟೆಲ್ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ

ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳ ಮೂಲ ಸೌಲಭ್ಯಗಳ ಅಭಿವೃದ್ಧಿಗೆ ಸರ್ಕಾರ ಬಿಡುಗಡೆ ಮಾಡಿದ ಅನುದಾನ ಬೇರೆ ಉದ್ದೇಶಕ್ಕೆ ಬಳಕೆಯಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ.

ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‍ನ ಎಚ್.ಎಂ.ರಮೇಶ್‍ಗೌಡ, ಕಾಂಗ್ರೇಸ್‍ನ ಪಿ.ಆರ್. ರಮೇಶ್ ವಿಶ್ವವಿದ್ಯಾಲಯದ ಕುಲಪತಿಗಳು ಈ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು. ಇದರ ಬಗ್ಗೆ ಚರ್ಚೆ ಮಾಡಲು ಅಧಿವೇಶನ ಮುಗಿದ ಬಳಿಕ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ಕರೆಯಲು ಸಮಾಜ ಕಲ್ಯಾಣ ಇಲಾಖೆಯು ಮುಖ್ಯಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

NEWS DESK
TIMES OF BENGALURU