ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೌಂದರ್ಯ ನರ್ಸಿಂಗ್ ಕಾಲೇಜಿನ 22 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ದೃಢಪಟ್ಟಿದೆ.

ಇದೀಗ ವಿದ್ಯಾರ್ಥಿಗಳಿಗೆ ನೆಲಮಂಗಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಸಂಪರ್ಕದಲ್ಲಿರುವವರಿಗೆ ಕೋವಿಡ್ ಟೆಸ್ಟ್ ಮಾಡಲು ನಿರ್ಧರಿಸಲಾಗಿದ್ದು, ಕಾಲೇಜಿನ ವಿದ್ಯಾರ್ಥಿಗಳ ಪೋಷಕರಿಗೆ ಆತಂಕ ಎದುರಾಗಿದೆ.

NEWS DESK
TIMES OF BENGALURU