ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ರಾಜ್ಯಕ್ಕೆ ಮತ್ತೆ 4 ಲಕ್ಷ ಡೋಸ್ ಕೊರೋನಾ ಲಸಿಕೆಯನ್ನು ತರಿಸಿಕೊಳ್ಳಲಾಗಿದೆ. ನಿನ್ನೆ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಆಗಮಿಸಿದ್ದು, ಕೇಂದ್ರ ಸರ್ಕಾರದ ಭರವಸೆಯಂತೆ ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ರವಾನೆಯಾಗಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ಲಸಿಕೆಯ ಅಭಾವವಿಲ್ಲ. ಈ ಬಗ್ಗೆ ಎಲ್ಲ ರೀತಿಯ ಕ್ರಮಗಳನ್ನೂ ಕೈಗೊಂಡಿದ್ದು, ಎಲ್ಲ ಅರ್ಹ ನಾಗರಿಕರೂ ತಮ್ಮ ಹೆಸರು ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆಯಬೇಕು. ಕೇಂದ್ರ ಸರ್ಕಾರ ನಮ್ಮ ನಿರೀಕ್ಷೆಯಷ್ಟು ಕೊರೋನಾ ಲಸಿಕೆಯನ್ನು ಕಳುಹಿಸಲಿದೆ. ರಾಜ್ಯದಲ್ಲಿ ಲಸಿಕೆಯ ಅಭಾವವಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
NEWS DESK
TIMES OF BENGALURU