ಮಾಸ್ಕ್ ಧರಿಸದಿದ್ರೆ 250 ರೂ. ದಂಡ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನಗರಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದೇ ಇದ್ದರೆ 250 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಂದಿನಿಂದ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ 250 ರೂ. ದಂಡ ತೆರಬೇಕಿದೆ. ಇತರೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೇ ಇದ್ದರೆ 100 ರೂ. ದಂಡ ಪಾವತಿಸಬೇಕಾಗಿದೆ. ಆರೋಗ್ಯ ಸಚಿವ ಕೆ.ಸುಧಾಕರ್ ಟ್ವಿಟರ್ ನಲ್ಲಿ ಈ ವಿಷಯ ತಿಳಿಸಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣವನ್ನು ಕಡಿಮೆಗೊಳಿಸಲು ನಗರ ಪ್ರದೇಶಗಳಲ್ಲಿ 250 ರೂ. ಮತ್ತು ಇತರೆ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ. ಸಭೆ ಸಮಾರಂಭಗಳಲ್ಲಿ, ಅಂಗಡಿ, ಮುಂಗಟ್ಟುಗಳಲ್ಲಿ, ಮಾಲ್, ಹೋಟೆಲ್ ಗಳಲ್ಲಿ ಕೊರೊನಾ ನಿಯಮ ಮೀರಿದರೆ 5000 ರೂ. ದಂಡ ಹಾಗೂ ಹವಾನಿಯಂತ್ರಿತ ಸಭಾಂಗಣ, ಹೋಟೆಲ್, ಸಭೆ ಹಾಗೂ ಸಮಾರಂಭಗಳ ಆಯೋಜಕರಿಗೆ 10 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಅವರು ಟ್ವೀಟರ್ ನಲ್ಲಿ ಎಚ್ಚರಿಸಿದ್ದಾರೆ.

NEWS DESK

TIMES  OF BENGALURU