ನಾಳೆಯಿಂದ ಕೆಂಗೇರಿ ಮಾರ್ಗದ ಮೆಟ್ರೋ ಸೇವೆ ಆರಂಭ

ಬೆಂಗಳೂರು: ನಮ್ಮ ಮೆಟ್ರೋ ಮೆಜೆಸ್ಟಿಕ್ ನಿಂದ ಮೈಸೂರು ರಸ್ತೆ ನಿಲ್ದಾಣದವರೆಗೆ ನಾಳೆಯಿಂದಲೇ ಪುನಾರಂಭವಾಗಲಿದೆ. ಮೈಸೂರು ರಸ್ತೆಯಿಂದ ಕೆಂಗೇರಿಯವರೆಗೆ ಪರೀಕ್ಷಾರ್ಥ ರೈಲು ಸಂಚಾರ ನಡೆಸಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಮಾ.21 ರಿಂದ 28 ರವರೆಗೆ ಕೆಂಪೇಗೌಡ ರೈಲು ನಿಲ್ದಾಣದಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಸಂಚಾರ ಬಂದ್ ಆಗಿರಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿತ್ತು.

ಇದೀಗ ನಿಗಧಿತ ಅವಧಿಗಿಂತ ಮೊದಲೇ ಕಾಮಗಾರಿ ಪೂರ್ಣಗೊಂಡಿರುವುದರಿಂದ ನಾಳೆ ಬೆಳಗ್ಗೆ 7 ಗಂಟೆಯಿಂದಲೇ ನೇರಳೆ ಮಾರ್ಗದಲ್ಲಿ ರೈಲು ಸಂಚರಿಸಲಿದೆ.

NEWS DESK
TIMES OF BENGALURU