ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ನೆಲಮಂಗಲ :  ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಬಸ್ ಒಂದು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದಂತ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಬಸ್‍ನಲ್ಲಿ ಪ್ರಯಾಣಿಸುತ್ತಿದ್ದಂತ ನಾಲ್ವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಬಳಿಯಲ್ಲಿ ನಡೆದಿದೆ.

ಗದಗ ಜಿಲ್ಲೆಯ ರೋಣದಿಂದ ಬೆಂಗಳೂರಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್, ನೆಲಮಂಗಲದ ಮಾದನಾಯಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದಂತ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದಾಗಿ ಬಸ್‍ನ ಮುಂಭಾಗದಲ್ಲಿ ಕುಳಿತಿದ್ದಂತ ಓರ್ವ ಪ್ರಯಾಣಿಕನ ಎರಡು ಕಾಲುಗಳು ತುಂಡಾಗಿವೆ ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಇನ್ನೂ ನಾಲ್ವರು ಸೇರಿದಂತೆ ಐವರು ಪ್ರಯಾಣಿಕರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

NEWS DESK

TIMES OF BENGALURU