ಸೋಂಕಿತರ ಕೈಗೆ ಕಡ್ಡಾಯವಾಗಿ ಸೀಲು ಹಾಕ್ಬೇಕು

ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿರುವ ಸರ್ಕಾರ ಹೊರಗಿನಿಂದ ಬರುವ ಜನರಿಗೆ ಆರ್‍ಟಿಪಿಸಿಆರ್ ಟೆಸ್ಟ್ ಕಡ್ಡಾಯಗೊಳಿಸಲು ನಿರ್ಧರಿಸಿದೆ. ಸೋಂಕಿತರ ಕೈಗೆ ಸೀಲು ಹಾಕಲಾಗುತ್ತದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಇಂದು ಬಿಬಿಎಂಪಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿತರ ಕೈಗೆ ಇನ್ನು ಮುಂದೆ ಕಡ್ಡಾಯವಾಗಿ ಸೀಲು ಹಾಕಲಾಗುತ್ತದೆ. ಸೋಂಕಿತರು ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿರಬೇಕು. ಸೋಂಕಿತರ ಸಂಪರ್ಕದಲ್ಲಿರುವವರ ಮೇಲೆ ನಿಗಾ ವಹಿಸಲಾಗುವುದು ಎಂದು ಅವರು ಹೇಳಿದರು. 45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಕೊರೊನಾ ಲಸಿಕೆ ಪಡೆಯಬೇಕು ಎಂದು ಅವರು ಹೇಳಿದರು.

NEWS DESK

TIMES OF BENGALURU