ಅನ್ನಭಾಗ್ಯದಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರವು ಅಂತ್ಯೋದಯ ಕಾರ್ಡ್‍ಗಳಿಗೆ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. ಅಂತ್ಯೋದಯ ಕಾರ್ಡ್ ದಾರರಿಗೆ ನೀಡಲಾಗುತ್ತಿದ್ದ ಅಕ್ಕಿ ಜೊತೆಗೆ ರಾಗಿ, ಜೋಳ ವಿತರಣೆ ಮಾಡಲು ನಿರ್ಧರಿಸಿದೆ. ಅಕ್ಕಿ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಸರ್ಕಾರ ಮಾಹಿತಿ ಕೊಟ್ಟಿದೆ. ಅಕ್ಕಿ ಬದಲು ರಾಗಿ, ಜೋಳ ವಿತರಿಸಲು ಆಹಾರ ಇಲಾಖೆ ಮುಂದಾಗಿದೆ. ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ ಎನ್ನಲಾಗಿದೆ.

NEWS DESK
TIMES OF BENGALURU