ಬೆಂಗಳೂರಿನಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ

ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂಧೆಗಳನ್ನು ವಿರೋಧಿಸಿ, ಇಂದು ಸಂಯುಕ್ತ ಕಿಸಾನ್ ಮೋರ್ಚಾ ದಿಂದ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಭಾರತ್ ಬಂದ್ ಸಂದರ್ಭದಲ್ಲಿ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇದುವರೆಗೆ ಕಂಡು ಬಂದಿಲ್ಲ.

ಕರ್ನಾಟಕದಲ್ಲಿ ಅಲ್ಪ ಮಟ್ಟಿಗೆ ಭಾರತ್ ಬಂದ್ ಬಿಸಿ ಮುಟ್ಟಿದ್ದರು, ಬೆಳಿಗ್ಗೆ 6 ಗಂಟೆಯಿಂದ ಆರಂಭಗೊಂಡಿರುವಂತ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಎಂದಿನಂತೆ ಸಂಚರಿಸುತ್ತಿದ್ದರೇ, ಕೆಎಸ್‍ಆರ್ ಟಿಸಿ ಬಸ್ ಸಂಚಾರ ಕೂಡ ಯಥಾಸ್ಥಿತಿಯಲ್ಲಿ ಇದ್ದು, ಸಾರಿಗೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ.

NEWS DESK

TIMES OF BENGALURU