ಬೆಂಗಳೂರು : ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಇಂದು ಭಾರತ್ ಬಂದ್ ಗೆ ಕರೆ ನೀಡಿದೆ.ಆದರೆ ರಾಜ್ಯದಲ್ಲಿ ಬಂದ್ ಬದಲು ಶವಯಾತ್ರೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ,ಮಾರ್ಚ್ 26 ರ ಭಾರತ್ ಬಂದ್ ಗೆ ಕರೆ ನೀಡಿತ್ತು. ಈ ಬಗ್ಗೆ ಪೂರ್ವಯೋಜಿತವಾಗಿ ರಾಜ್ಯದ ರೈತರು, ಜನಪರ ಸಂಘಟನೆಗಳು ಚರ್ಚಿಸದಿರುವ ಹಿನ್ನೆಲೆಯಲ್ಲಿ ಯಶಸ್ವಿ ಬಂದ್ ನಡೆಸುವ ಬಗ್ಗೆ ತೀರ್ಮಾನಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಾಜ್ಯದಲ್ಲಿ ಬಂದ್ ಕಾರ್ಯಕ್ರಮದ ಬದಲು ಎಲ್ಲಾ ಜಿಲ್ಲೆಗಳಲ್ಲಿ ಕರಾಳ ಕೃಷಿ ಕಾಯ್ದೆಗಳ ಶವಯಾತ್ರೆ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
NEWS DESK
TIMES OF BENGALURU