ಮನೆಗಳ ಹಕ್ಕು ಪತ್ರ ನೋಂದಣಿ ಶುಲ್ಕ ಇಳಿಕೆ

ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ನಾಗರಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಹಕ್ಕು ಪತ್ರ ನೋಂದಣಿ ಶುಲ್ಕವನ್ನು ಇಳಿಕೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು. ಫಲಾನುಭವಿಗಳ ಹಕ್ಕು ಪತ್ರ ನೋಂದಣಿ ಶುಲ್ಕ ಸಾಮಾನ್ಯ ವರ್ಗದವರಿಗೆ 10 ರಿಂದ 4 ಸಾವಿರ ಮತ್ತು ಎಸ್‍ಸಿ, ಎಸ್‍ಟಿ ಸಮುದಾಯದವರಿಗೆ 4 ರಿಂದ 2 ಸಾವಿರಕ್ಕೆ ಇಳಿಸಲಾಗಿದೆ.

ಪ್ರಧಾನಿ ಮೋದಿ ಮತ್ತು ಸಿಎಂ ಬಿ.ಎಸ್ ಯಡಿಯೂರಪ್ಪ, ಬಡವರು ಮನೆ ಇಲ್ಲದೆ ಜೀವನ ಸಾಗಿಸಬಾರದು. ಶಾಶ್ವತ ಮನೆ ಪ್ರತಿಯೊಬ್ಬ ನಾಗರಿಕರಿಗೆ ಕಲ್ಪಿಸಬೇಕು ಎಂಬ ಆಶಯವನ್ನು ಮೂಡಿಸಿದರು. ಎಲ್ಲ ವರ್ಗದ ಜನರಿಗೆ ವಸತಿ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ವಸತಿ ಇಲಾಖೆ ನಿರ್ಮಾಣ ಹಂಚಿಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

NEWS DESK

TIMES OF BENGALURU