10 ಸಿಡಿ ಬಿಡಲಿ, ಎಲ್ಲದಕ್ಕೂ ನಾನು ಸಿದ್ಧನಿದ್ದೇನೆ

ಬೆಂಗಳೂರು : ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣ ಸಂಬಂಧ ಯುವತಿ ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ನಿಜವಾದ ಸಂತ್ರಸ್ತೆಯಾಗಿದ್ದರೆ ಮೊದಲೇ ದೂರು ಕೊಡಬೇಕಿತ್ತು. ಈಗ ಎಲ್ಲೋ ಕುಳಿತು ದೂರು ಕೊಡುತ್ತಿದ್ದಾಳೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೊಂದು ಮಹಾ ಷಡ್ಯಂತ್ರ ಎಂದು ಮೊದಲಿಂದಲೂ ಹೇಳುತ್ತಿದ್ದೇನೆ.

ಇಂತಹ 10 ಸಿಡಿ ಬಿಡಲಿ. ಯಾವ ಕೇಸ್ ಬೇಕಾದರೂ ಹಾಕಲಿ. ಎಲ್ಲದಕ್ಕೂ ನಾನು ಸಿದ್ದನಿದ್ದೇನೆ ಎಂದು ಹೇಳಿದ್ದಾರೆ.ಯಾವುದೇ ಕಾರಣಕ್ಕೂ ನಾನು ನಿರೀಕ್ಷಣಾ ಜಾಮೀನು ತೆಗೆದುಕೊಳ್ಳುವುದಿಲ್ಲ. ನಾನೇನು ತಪ್ಪು ಮಾಡಿಲ್ಲ. ಹಾಗಿದ್ದ ಮೇಲೆ ನಾನೇಕೆ ಜಾಮೀನು ತೆಗೆದುಕೊಳ್ಳಬೇಕೆಂದು ಪ್ರಶ್ನಿಸಿದ್ದಾರೆ.

NEWS DESK

TIMES OF BENGALURU