ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ

ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಡಿ ಲೇಡಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಆ  ವಿಡಿಯೋನಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಸಿಡಿ ಲೇಡಿ ಹೇಳಿದ್ದಾಳೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ ಮತ್ತು ಆಕೆಯ ತಂದೆ ತಾಯಿಗೆ ಭದ್ರತೆ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

 

NEWS DESK

TIMES OF BENGALURU