ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ದೂರು ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಯುವತಿ ನೀಡಿದ ದೂರು ಆಧರಿಸಿ ಮಾಜಿ ಸಚಿವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ, ಮಾನಹಾನಿ, ಜೀವ ಬೆದರಿಕೆಯೊಡ್ಡಿದ್ದಾಗಿ ಯುವತಿ ದೂರು ದಾಖಲಿಸಿದ್ದಳು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಐಪಿಸಿ ಸೆಕ್ಷನ್ 376 ಸಿ ( ಅಧಿಕಾರ ದುರುಪಯೋಗ ಪಡಿಸಿಕೊಂಡು ಲೈಂಗಿಕ ದೌರ್ಜನ್ಯ), ಸೆಕ್ಷನ್ 354 (ಜೀವ ಬೆದರಿಕೆ), ಸೆಕ್ಷನ್ 354 (ಮಹಿಳೆಯ ಮಾನಹಾನಿ), ಐಟಿ ಕಾಯ್ದೆ 67 (ಅಶ್ಲೀಲ ವಿಡಿಯೋ ಹರಿಬಿಟ್ಟ ಆರೋಪ) ರ ಅಡಿ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.

NEWS DESK

TIMES OF BENGALURU