ಸಿಡಿ ಆರೋಪಿಯನ್ನು ತಕ್ಷಣ ಬಂಧಿಸಬೇಕು

ಬೆಂಗಳೂರು: ಸಿಡಿ ಲೇಡಿ ಪರ ವಕೀಲ ಜಗದೀಶ್ ಅವರು ಸಿಡಿ ಪ್ರಕರಣದ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಫೇಸ್ ಬುಕ್ ನಲ್ಲಿ ಮಾತನಾಡಿರುವ ವಕೀಲ ಜಗದೀಶ್ ಅವರು ಸಿಡಿ ಆರೋಪಿಯನ್ನು ತಕ್ಷಣ ಅರೆಸ್ಟ್ ಮಾಡಬೇಕು ಎಂದು ಹೇಳಿದ್ದಾರೆ. ಇಷ್ಟೆಲ್ಲಾ ಆದ್ರೂ ಎಸ್‌ಐಟಿ ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಅರೆಸ್ಟ್ ಮಾಡಿದರೆ ಸರ್ಕಾರ ಬೀಳುತ್ತೆ ಅಂತಾ ಹೇಳುತ್ತಿದ್ದಾರೆ. ಆರೋಪಿ ತನಿಖೆಯ ಹಾದಿಯನ್ನು ತಪ್ಪಿಸುತ್ತಿದ್ದಾರೆ. ಮಾಧ್ಯಮಗಳ ಮೂಲಕ ನಮಗೆ ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಆರೋಪಿಯನ್ನು ತಕ್ಷಣ  ಬಂಧಿಸಬೇಕೆಂದು ಯುವತಿ ಪರ ವಕೀಲ ಜಗದೀಶ್ ಆಗ್ರಹಿಸಿದ್ದಾರೆ.

NEWS DESK

TIMES OF BENGALURU