ಇಂದು ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು: 2021-22ನೇ ಸಾಲಿನ ಆರ್ಥಿಕ ವರ್ಷದ ಬಿಬಿಎಂಪಿ ಬಜೆಟ್ ಇಂದು ಮಂಡನೆಯಾಗಲಿದೆ. ಬಿಬಿಎಂಪಿಯ ಆಡಳಿತಾಧಿಕಾರಿ ಗೌರವ್ ಗುಪ್ತ ಅವರ ಅಧ್ಯಕ್ಷತೆಯಲ್ಲಿ ಬಜೆಟ್ ಮಂಡನೆಯಾಗಲಿದೆ. ಬಿಬಿಎಂಪಿಯಲ್ಲಿ ಚುನಾಯಿತ ಕೌನ್ಸಿಲ್ ಅಸ್ತಿತ್ವದಲ್ಲಿ ಇಲ್ಲದ ಕಾರಣದಿಂದಾಗಿ ಬಜೆಟ್ ರೂಪಿಸುವ ಹೊಣೆಗಾರಿಕೆ ಗೌರವ್ ಗುಪ್ತ ಅವರ ಮೇಲಿದೆ.

ಅವರು ಮೇಯರ್ ಹಾಗೂ ಸ್ಥಾಯಿ ಸಮಿತಿಗಳ ಅಧ್ಯಕ್ಷರ ಅಧಿಕಾರಗಳೆಲ್ಲವನ್ನು ಹೊಂದಿದ್ದರಿಂದ ಬಿಬಿಎಂಪಿ ಬಜೆಟ್ ಮಂಡಿಸಲಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಬಿಬಿಎಂಪಿ ಶಾಲೆ, ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸುವುದು ಸೇರಿದಂತೆ ಇನ್ನಿತರ ತ್ವರಿತ ಯೋಜನೆಗಳ ಅನುಷ್ಠಾನಗಳನ್ನು ಗಮನದಲ್ಲಿ ಇಟ್ಟಿಕೊಂಡು ಬಿಬಿಎಂಪಿ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.

NEWS DESK

TIMES OF BENGALURU